ರಾಮ ಬದಲಾಗಿ ರಾವಣ ಇರಬೇಕಿತ್ತು- ಯಡಿಯೂರಪ್ಪ

ಬಿಜೆಪಿಯವರನ್ನು ಉಗ್ರಗಾಮಿಗಳು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ನನ್ನ ಹೆಸರಿನಲ್ಲಿ ರಾಮ ಇದ್ದಾನೆ ಎನ್ನುತ್ತಿದ್ದಾರೆ. ಇದು ದುರ್ದೈವದ ಸಂಗತಿ ರಾಮನ ಬದಲಾಗಿ ರಾವಣ ಇರಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.
ಶಿರಾದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರೂ, ಇಂದಿರಾಗಾಂಧಿವರ ಕೈಯಲ್ಲೇ ಆಗಿಲ್ಲ, ಇನ್ನು ಸಿದ್ದರಾಮಯ್ಯ ಅವರು ಯಾವ ಲೆಕ್ಕ, ಅವರೊಬ್ಬ ಬಚ್ಚಾ ಎಂದಿದ್ದಾರೆ.
ದೇಶದ 19 ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಇನ್ನೂ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲೂ ಅಧಿಕಾರಕ್ಕೆ ಬರಲಿದೆ. ಇಂತಹ ಪಕ್ಷವನ್ನು ಉಗ್ರಗಾಮಿ ಎಂದಿರುವುದು ಮುಖ್ಯಮಂತ್ರಿಗೆ ಶೋಭೆ ತರುವುದಿಲ್ಲ ಎಂದು ತಿಳಿಸಿದ್ದಾರೆ.
ಮಹಾದಾಯಿ ನೀರಿನ ವಿವಾದವನ್ನು ಬಗೆಹರಿಸಲು ಬಿಜೆಪಿ ಪ್ರಯತ್ನಿಸಿತ್ತು, ಆದರೆ, ಕಾಂಗ್ರೆಸ್ ಷಡ್ಯಂತ್ರ ಮಾಡಿ ಸಮಸ್ಯೆ ಬಗೆಹರಿಯಲು ಬಿಡಲಿಲ್ಲ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.
|
|